ಸುಳ್ಯ; ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳು ಶರಣಾಗದಿದ್ದರೆ ಮನೆ ಜಫ್ತಿ-ಸಾರ್ವಜನಿಕವಾಗಿ ಅನೌನ್ಸ್‌‌ ಮಾಡುತ್ತಿರುವ ಪೊಲೀಸರು

ಸುಳ್ಯ:ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಜೂ.30ರೊಳಗೆ ಶರಣಾಗದಿದ್ದರೆ ಅವರ ಮನೆಯನ್ನು ಜಪ್ತಿ ಮಾಡುವುದಕ್ಕೆ ಎನ್‌ಐಎ ಅಧಿಕಾರಿಗಳು ಮುಂದಾಗಿದ್ದಾರೆ‌‌.

ಈ ಬಗ್ಗೆ ಇಂದು ಎನ್‌ಐಎ ಅಧಿಕಾರಿಗಳು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿ ವರ್ಧಕದ ಮೂಲಕ ಅನೌನ್ಸ್‌ ಮಾಡುತ್ತಿದ್ದಾರೆ.

ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಿಗೆ ತಿಳಿಸಲಾಗಿದೆ.

ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಮತ್ತು ಬೆಳ್ಳಾರೆಯ ಮುಸ್ತಫ ಮನೆಗೆ ಎನ್‌ಐಎ ಅಧಿಕಾರಿಗಳು ನೋಟಿಸ್‌ ಅಂಟಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್