ಸುಳ್ಯ; PFI ಕಚೇರಿಯನ್ನು ಜಪ್ತಿ ಮಾಡಿದ ಎನ್ ಐ ಎ ಅಧಿಕಾರಿಗಳು

ಸುಳ್ಯ:ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ತಂಡ ಸುಳ್ಯ ಪೇಟೆಯಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿಯನ್ನು ಜಪ್ತಿ ಮಾಡಿದೆ ಎಂದು ವರದಿಯಾಗಿದೆ.

ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್​ನ ಮೊದಲ ಮಹಡಿಯಲ್ಲಿದ್ದ ಪಿಎಫ್‌ಐ ಕಚೇರಿಯನ್ನು ಎನ್ ಐಎ ವಶಕ್ಕೆ ಪಡೆದ ಬಗ್ಗೆ ವರದಿಯಾಗಿದೆ.

ಆಸ್ತಿಯನ್ನು ಗುತ್ತಿಗೆ ಅಥವಾ ಬಾಡಿಗೆಗೆ ನೀಡಬಾರದು ಪರಾಬಾರೆ ಮಾಡಬಾರದು ಎಂದು ಆದೇಶಿಸಲಾಗಿದೆ. ಯಾವುದೇ ಆಸ್ತಿಯನ್ನು ಕಚೇರಿಯಿಂದ ಸ್ಥಳಾಂತರಿಸುವುದು ಅಥವಾ ನವೀಕರಣ ಕಾರ್ಯವನ್ನು ಕೈಗೊಳ್ಳದಂತೆ ನಿರ್ದೇಶಿಸಲಾಗಿದೆ.

ಆಸ್ತಿಯನ್ನು ಜಫ್ತಿ ಪ್ರತಿಯನ್ನು ಜಿಲ್ಲಾಧಿಕಾರಿ,ಎಸ್ಪಿ, ಮಾಲಕರಿಗೆ ನೀಡಲಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್