ಅರಂತೋಡು:ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಬೆಳ್ಳಂಪಾಡಿ ಗುಡ್ಡದಲ್ಲಿ ನಡೆದಿದೆ.
ಅರಂತೋಡು ನಿವಾಸಿ ರವಿ ಆತ್ಮಹತ್ಯೆ ಮಾಡಿಕೊಂಡವರು.
ಘಟನೆ ಮಂಗಳವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಸ್ಥಳಕ್ಕೆ ರಾತ್ರಿಯೇ ಪೋಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಮಹಜರು ನಡೆಸಿರುವುದಾಗಿ ತಿಳಿದುಬಂದಿದೆ.ಈ ಕುರಿತು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.