ಸುಳ್ಯ; ಅಂಗಡಿಗೆ ಎಂದು ಹೇಳಿ ಹೋಗಿದ್ದ ಬಾಲಕ ನಾಪತ್ತೆ

ಸುಳ್ಯ: ಬಾಲಕನೋರ್ವ ನಾಪತ್ತೆಯಾಗಿರುವ ಘಟನೆ ಪೆರುವಾಜೆ ಗ್ರಾಮದ ಕುಂಡಡ್ಕ ಬಳಿ ನಡೆದಿದೆ.

ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನಾಪತ್ತೆಯಾಗಿದ್ದಾನೆ.

ಈತ ತಲಪಾಡಿಯ ಬಿಲಾಲ್ ಮಸೀದಿಯಲ್ಲಿ ಮದ್ರಸ ಶಿಕ್ಷಣದ ಜತೆಗೆ ಶಾಲಾ ಶಿಕ್ಷಣ ಪಡೆಯುತಿದ್ದ. 8ನೇ ತರಗತಿಯ ವಿದ್ಯಾರ್ಥಿ ಆಗಿರುವ ಈತ ಗುರುವಾರ ಸಂಜೆ ಶಾಲೆಯಿಂದ ಮಸೀದಿಗೆ ಬಂದಿದ್ದು, ಅಲ್ಲಿ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವನು ಮರಳಿ ಬಂದಿಲ್ಲ. ಪೋಷಕರು ಉಳ್ಳಾಲ ಠಾಣೆಯಲ್ಲಿ ದೂರು ನೀಡಿದ್ದು ಹುಡುಕಾಟ ನಡೆಸುತ್ತಿದ್ದಾರೆ.

ಗೋಧಿ ಮೈಬಣ್ಣ ಹೊಂದಿದ್ದು ಎತ್ತರ ನಾಲ್ಕೂವರೆ ಅಡಿ ಉದ್ದವಿದ್ದು ಕಾಣಲು ಸೌಮ್ಯ ಸ್ವಭಾವದ ಬಾಲಕನಾಗಿದ್ದು ಯಾರಾದರೂ ಕಂಡು ಬಂದಲ್ಲಿ ತಕ್ಷಣ ಈ ನಂಬರಿಗೆ 9731293268, 9686123077 ಕರೆ ಮಾಡುವಂತೆ ಮನೆಯವರು ವಿನಂತಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು