ಸುಳ್ಯದ ಯುವಕ ಕುಂದಾಪುರದಲ್ಲಿ ಹೊಳೆಯಲ್ಲಿ ನಾಪತ್ತೆ

ಕುಂದಾಪುರ:ಸುಳ್ಯದ ಯುವಕ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ.

ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್ಂ.ಎಂ. (21) ಎಂಬಾತ ನಾಪತ್ತೆಯಾಗಿರುವ ಯುವಕ.

ಸುಹಾಸ್ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ. ಶುಕ್ರವಾರ ಬೆಳಿಗ್ಗೆಯಷ್ಟೇ ತನ್ನ ಮನೆಯಿಂದ ಬಂದು ಸ್ನೇಹಿತರೊಂದಿಗೆ ಸೌಡ ಹೊಳೆಗೆ ಈಜಲು ತೆರಳಿದ್ದರು.

ಹೊಳೆಯಲ್ಲಿ ನೀರಿಗಿಳಿದ ಸುಹಾಸ್ ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಜೊತೆಗಿದ್ದ ಯುವಕರು ತಕ್ಷಣ ಸ್ಥಳೀಯರಿಗೆ ವಿಚಾರ ತಿಳಿಸಿದ್ದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರು ಧಾವಿಸಿ ಯುವಕನಿಗೆ ಹುಡುಕಾಟ ನಡೆಸುತ್ತಿದ್ದಾರೆ.

ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com