ಸುಳ್ಯ; ಬಾಲಕಿ ಮೇಲೆ ಅತ್ಯಾಚಾರ, ಆರೋಪಿಯ ಬಂಧನ

ಸುಳ್ಯ:ಬಾಲಕಿ ಮೇಲೆ ಅತ್ಯಾಚಾರಗೈದ ಆರೋಪದಡಿ ಯುವಕನನ್ನು ಪೋಕ್ಸೋ ಪ್ರಕರಣದಡಿ ಬಂಧಿಸಲಾಗಿದೆ.

ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾರ್ತಿಕ್ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ.ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್‌ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್‌ ದೈಹಿಕ ಸಂಪರ್ಕ ಎಸಗಿರುವುದನ್ನು ತಿಳಿಸಿದ್ದಾಗಿ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಕುರಿತು ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್