ಸುಳ್ಯ; ಉಸ್ಮಾನ್ ಕೊಲೆ‌ ಪ್ರಕರಣ, ಆರೋಪಿ ಸಹೋದರರು ಪೊಲೀಸ್ ವಶಕ್ಕೆ

ಸುಳ್ಯ:ಆಸ್ತಿ ವಿವಾದಕ್ಕೆ ಸಂಬಂಧಿಸಿ ಸಂಪ್ಯದ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಹೋದರರನ್ನು
ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆಂದು ತಿಳಿದು ಬಂದಿದೆ.

ಹತ್ಯೆಗೀಡಾದ ಉಸ್ಮಾನ್ ಸಹೋದರರಾದ ರಫೀಕ್ ಮತ್ತು ಸತ್ತಾರ್ ಗೆ ಪೊಲೀಸರು ಬಂಧಿಸಿದ್ದಾರೆ.

ಜು.14 ರಂದು ಉಸ್ಮಾನ್ ರನ್ನು ಚೂರಿಯಿಂದ ಇರಿದು ಕೊಲೆ ಮಾಡಿ ಬಳಿಕ ಆರೋಪಿಗಳು ರಿಕ್ಷಾದಲ್ಲಿ ಅರಂತೋಡುವರೆಗೆ ಬಂದು ಮತ್ತೊಂದು ರಿಕ್ಷದಲ್ಲಿ ಸುಳ್ಯಕ್ಕೆ ತೆರಳಿ ಕೇರಳ ಕಡೆಗೆ ಪರಾರಿಯಾಗಿದ್ದರು.

ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣ -ತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ಕೃತ್ಯ ನಡೆದಿದೆ ಎನ್ನುವುದು ತನಿಖೆಯಿಂದ ಬಯಲಾಗಿತ್ತು.

ಟಾಪ್ ನ್ಯೂಸ್