ಸುಳ್ಯ;ಕಾರು & ಬೈಕ್ ನಡುವೆ ನಡೆದ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ನಡೆದಿದೆ.
ಸುಳ್ಯ ತಾಲೂಕಿನ ಕೊಲ್ಲಮೊಗ್ರು ಧರ್ಮಪಾಲ ಗೌಡ ಬಾಳೆಬೈಲು ಮತ್ತು ಕಮಲಾಕ್ಷಿ ದಂಪತಿ ಪುತ್ರ ಯತೀಶ್ ಬಾಳೆಬೈಲು (30) ಮೃತ ಯುವಕ.
ಬೆಂಗಳೂರಿನಲ್ಲಿ ಯತೀಶ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ.ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಯತೀಶ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ.
ಯತೀಶ್ ಅವರು ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದರು. ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಸೇರಿ ಕುಟುಂಬಸ್ಥರನ್ನು ಅಗಲಿದ್ದಾರೆ.