ಮಂಗಳೂರು:ಜೆಡಿಎಸ್ ಗೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಸುಮತಿ ಹೆಗ್ಡೆಯವರು SDPI ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.ಬಳಿಕ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
SDPI ಪಕ್ಷದ ಸಂಸ್ಥಾಪನಾ ದಿನಾಚರಣೆ ಸಂಬಂಧಿಸಿದ ನಾಯಕರ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಸುಮತಿ ಹೆಗ್ಡೆ Sdpiಗೆ ಸೇರ್ಪಡೆಗೊಂಡಿದ್ದಾರೆ.
ಸುಮತಿ ಹೆಗ್ಡೆಯವರೊಂದಿಗೆ ಮಹಿಳಾ ಜೆಡಿಎಸ್ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕವಿತಾ ಜೆಡಿಎಸ್ ಮಂಗಳೂರು ನಗರ ಕಾರ್ಯದರ್ಶಿ ಅಲ್ತಾಫ್ ತುಂಬೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ.
ಕಾರ್ಯಕ್ರಮದಲ್ಲಿ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ,ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಝ್ ಫರಂಗಿಪೇಟೆ, ಅಲ್ಫೋನ್ಸ್ ಫ್ರಾಂಕೊ, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ,ರಾಜ್ಯ ಮುಖಂಡರಾದ ಅಥಾವುಲ್ಲ ಜೋಕಟ್ಟೆ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.