ಬೆಂಗಳೂರು:ಜೈಲಿನ ಶೌಚಾಲಯದಲ್ಲಿ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವನ್ನಪ್ಪಿರುವ ರೀತಿ ಪತ್ತೆಯಾಗಿದ್ದಾರೆ.
ಸುನೀಲ್ ಮೃತ ರೌಡಿ ಶೀಟರ್. ಸುನಿಲ್ ಮೃತದೇಹ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಪತ್ತೆಯಾಗಿದೆ.
ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದ ಸುನಿಲ್ ಇನ್ನು ಹತ್ತು ದಿನಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆ ಆಗಬೇಕಿದ್ದ.ಆದರೆ ಆತ ಬಿಡುಗಡೆಗೆ ಮೊದಲೇ ಮೃತಪಟ್ಟಿದ್ದಾನೆ.
ರೌಡಿಶೀಟರ್ ಸುನೀಲ್ ಕಗ್ಗಲಿಪುರದಲ್ಲಿ ವಿನೋದ್ ಎಂಬಾತನನ್ನ ಕೊಲೆ ಮಾಡಿ ಜೈಲು ಸೇರಿದ್ದ.ಕೊಲೆ ಮಾಡಿ ಜೈಲು ಸೇರಿದ್ದ ಸುನೀಲ್ ಕೆಲ ದಿನಗಳ ಹಿಂದೆ ತನ್ನನ್ನು ಕೊಲೆ ಮಾಡಲು ಸ್ಕೆಚ್ ಹಾಕಲಾಗಿದೆ ಎಂದು ಆರೋಪಿಸಿದ್ದ ಎಂದು ವರದಿಯಾಗಿದೆ.
ರೌಡಿಶೀಟರ್ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇನ್ನು ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪೊಲೀಸರು ತನಿಖೆ ಶುರು ಮಾಡಿದ್ದು,ತನಿಖೆಯ ಬಳಿಕ ಸಾವಿಗೆ ನಿಜವಾದ ಕಾರಣ ತಿಳಿದು ಬರಬೇಕಿದೆ.