ಹಿಜಾಬ್ ವಿವಾದದ ಕುರಿತು ವಿಚಾರಣೆಗೆ ತ್ರಿಸದಸ್ಯ ಪೀಠ ರಚನೆಗೆ ಮುಂದಾದ ಸುಪ್ರೀಂ‌ಕೋರ್ಟ್

ನವದೆಹಲಿ;ಹಿಜಾಬ್ ನಿರ್ಬಂಧಿಸಿದ ಆದೇಶದ ವಿಚಾರಣೆಗೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡಲು ಮುಂದಾಗಿದೆ.

ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಮಾನ್ಯ ಮಾಡಿತ್ತು, ಇದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು
ಹೀಗಾಗಿ ಇದರ ವಿಚಾರಣೆ ದ್ವಿಸದಸ್ಯ ಪೀಠದಲ್ಲಿ ನಡೆದು
ಭಿನ್ನ ತೀರ್ಪು ಹೊರ ಬಿದ್ದಿತ್ತು.

ಈ ಮೊದಲು ಕರ್ನಾಟಕ ಹೈಕೋರ್ಟ್, ಸರ್ಕಾರದ ತೀರ್ಮಾನವನ್ನು ಮಾನ್ಯ ಮಾಡಿ ನೀಡಿದ್ದ ತೀರ್ಪನ್ನೇ ಮುಂದುವರಿಸಲಾಗಿತ್ತು. ಇದೀಗ ಇದರ ವಿಚಾರಣೆಗಾಗಿ ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠ ರಚನೆ ಸಾಧ್ಯತೆ ಇದೆ.

ಹಿರಿಯ ವಕೀಲೆ ಮೀನಾಕ್ಷಿ ಅರೋರಾ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ಪೀಠ ರಚಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಟಾಪ್ ನ್ಯೂಸ್