ದ್ವೇಷ ಭಾಷಣದ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಬೇಕು, ವಿಳಂಬವಾದರೆ ನ್ಯಾಯಾಂಗ ನಿಂದನೆಯಾಗಲಿದೆ- ಮಹತ್ವದ ನಿರ್ದೇಶನ‌‌ ನೀಡಿದ ಸುಪ್ರೀಂಕೋರ್ಟ್

ನವದೆಹಲಿ;ದ್ವೇಷ ಭಾಷಣ ಮಾಡಿದಾಗ ಯಾವುದೇ ದೂರುಗಳಿಲ್ಲದೆ ಪೊಲೀಸರು ಸ್ವಯಂಪ್ರೇರಿತ ಕ್ರಮ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ
ಈ ಕುರಿತು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು,ಸಂವಿಧಾನದ ಪೀಠಿಕೆಯಲ್ಲಿ ಸೂಚಿಸಿರುವ ಭಾರತದ ಜಾತ್ಯತೀತ ಲಕ್ಷಣವನ್ನು ಸಂರಕ್ಷಿಸಲು ಭಾಷಣ ಮಾಡಿದ ವ್ಯಕ್ತಿಗಳ ಧರ್ಮವನ್ನು ಲೆಕ್ಕಿಸದೆ ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ವರದಿಯಾಗಿದೆ.

ದ್ವೇಷ ಭಾಷಣ ಪ್ರಕರಣಗಳನ್ನು ದಾಖಲಿಸುವಲ್ಲಿನ ವಿಳಂಬವನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಹೇಳಿದೆ.

ದ್ವೇಷ ಭಾಷಣವನ್ನು ಗಂಭೀರ ಅಪರಾಧವೆಂದು ಕರೆದಿದೆ. ಇದು ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com