ಸುರತ್ಕಲ್; ಅಪಘಾತದ ಗಾಯಾಳು ಬಾಲಕ ಮೃತ್ಯು; ವೈದ್ಯರ ನಿರ್ಲಕ್ಷ್ಯ ಆರೋಪ

ಸುರತ್ಕಲ್‌:ರಸ್ತೆ ಅಪಘಾತದ ಗಾಯಾಳು ಬಾಲಕ ಮೃತಪಟ್ಟ ಘಟನೆ ಸುರತ್ಕಲ್ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದ್ದು, ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯ ಆರೋಪಿಸಿದ್ದಾರೆ.

ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ (16) ಸುರತ್ಕಲ್ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ.

ಸ್ಥಳದಲ್ಲಿ ಬಾಲಕನ ಕುಟುಂಬಸ್ಥರು ಸೇರಿದ್ದು, ಪ್ರತಿಭಟನೆ ನಡೆಸಿದ್ದಾರೆ.ಸ್ಥಳಕ್ಕೆ ಸಿಪಿಐಎಂ ಮುಖಂಡರಾದ ಮುನೀರ್ ಕಾಟಿಪಳ್ಳ,ಕಾಂಗ್ರೆಸ್ ಮುಖಂಡರಾದ ಇನಾಯತ್ ಅಲಿ ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್, ಕಾಂಗ್ರೆಸ್ ಮುಖಂಡ ಪುರುಷೋತ್ತಮ ಚಿತ್ರಾಪುರ ಆಗಮಿಸಿ ಆಕ್ರೋಶಿತರನ್ನು ಸಮಾಧಾನಪಡಿಸಿದ್ದಾರೆ.

ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ನ್ಯಾಯ ಒದಗಿಸಲು ಆಗ್ರಹಿಸಿದ್ದು, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆಯ ಹಿನ್ನಲೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ಮುಖಂಡರು, ಮೃತರ ಕುಟುಂಬಸ್ಥರು,ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ್ದಾರೆ.

ಮಂಗಳವಾರ ರಾತ್ರಿ 8 ಗಂಟೆಗೆ ಸುರತ್ಕಲ್‌ ಮುಕ್ಕದಲ್ಲಿ ಅಪಘಾತ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ಮೊಯ್ದಿನ್‌ ಫರ್ಹಾನ್‌ ನನ್ನು ಸುರತ್ಕಲ್‌ ನಲ್ಲಿರುವ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತ ನಡೆದ ಬಳಿಕ ಬಾಲಕ ಮನೆಯವರು ಹಾಗು ಸ್ನೇಹಿತರೊಂದಿಗೆ ಮಾತನಾಡಿದ್ದ ಎನ್ನಲಾಗಿದೆ.

ತುರ್ತು ಶಸ್ತ್ರಚಿಕಿತ್ಸೆ ನಡೆಸಲು ಹೇಳಿದ್ದ ವೈದ್ಯಾಧಿಕಾರಿ ಶಸ್ತ್ರ ಚಿಕಿತ್ಸೆಯ ವೇಳೆ ನೀಡಿದ್ದ ಅನಸ್ತೇಶಿಯಾ ಓವರ್ ಡೋಸ್ ನೀಡಿದ ಪರಿಣಾಮ ಬಾಲಕ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪ ಮಾಡಿದ್ದಾರೆ.

ಟಾಪ್ ನ್ಯೂಸ್