ಸುರತ್ಕಲ್; ಗುಡ್ಡ ಕುಸಿತ, ಓರ್ವ ಮೃತ್ಯು, ಇನ್ನೋರ್ವನಿಗೆ ಗಾಯ

ಸುರತ್ಕಲ್;ಕೆಲಸ ಮಾಡುವಾಗ ಗುಡ್ಡ ಕುಸಿತ ಉಂಟಾಗಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೇಳೈರು ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ.

ಓಬಲೇಶ್ವರ ಮೃತ ದುರ್ದೈವಿ.ಇವರು ರೈಲ್ವೇ ಸೇತುವೆಯ ಬಳಿ ಕೆಲಸ ಮಾಡುತ್ತಿದ್ದಾಗ ಗುಡ್ಡ ಕುಸಿದು ಮಣ್ಣು ಮೈಮೇಲೆ ಬಿದ್ದಿದೆ.

ಘಟನೆಯಲ್ಲಿ ಗೋವಿಂದಪ್ಪ, ತಿಮ್ಮಪ್ಪ, ಈರಣ್ಣ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ಅವರ ಮೇಲೂ ಮಣ್ಣು ಬಿದ್ದು ಗಾಯಗಳಾಗಿವೆ ಎನ್ನಲಾಗಿದೆ. ಗೋವಿಂದಪ್ಪ ಅವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ‌.

ಘಟನೆಗೆ ಸಂಬಂಧಿಸಿ ಸುರತ್ಕಲ್‌ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಟಾಪ್ ನ್ಯೂಸ್