ಸುರತ್ಕಲ್; ಕಾರ್ಮಿಕರ ನಡುವೆ ಹೊಡೆದಾಟ, ಓರ್ವ ಸಾವು

ಸುರತ್ಕಲ್‌:ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು,ಇಬ್ಬರು ಗಾಯಗೊಂಡ ಘಟನೆ ಕುಳಾಯಿ ಮಾರ್ಬಲ್‌ ಸಂಸ್ಥೆಯ ಬಳಿ ನಡೆದಿದೆ.

ಹೊಡೆದಾಟದಲ್ಲಿ ಬಿಹಾರ ಮೂಲದ ಚೋಟು ಕುಮಾರ್ (21) ಮೃತಪಟ್ಟಿದ್ದು, ಇವರು ಕುಳಾಯಿಯ ಮಾರ್ಬಲ್‌ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಶನಿವಾರ ರಾತ್ರಿ ಊಟಕ್ಕೆ ಸಂಬಂಧಿಸಿಂತೆ ಮೂವರ ಮಧ್ಯೆ ಹೊಡೆದಾಟ ನಡೆದಿದೆ.ಹೊಡೆದಾಟದಲ್ಲಿ ಗಾಯಗೊಂಡ ಬಳಿಕ ಮೂವರನ್ನು ಕೂಡ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಗಂಭೀರ ಗಾಯಗೊಂಡಿದ್ದ ಛೋಟು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com