ಸುರತ್ಕಲ್; ರಸ್ತೆ ದಾಟಲು ನಿಂತಿದ್ದ ಯುವಕರಿಗೆ ಬಸ್ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ಸುರತ್ಕಲ್; ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಎಕ್ಸ್ ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಹೊಸಬೆಟ್ಟು ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಹಳೆಯಂಗಡಿ ಇಂದಿರಾ ನಗರ ನಿವಾಸಿ‌ ಮುಹಮ್ಮದ್ ಶಾಹಿಲ್(20) ಮತ್ತು ಅರಾಫತ್(19) ಎಂದು ಗುರುತಿಸಲಾಗಿದೆ.

ಶಾಹಿಲ್ ಮತ್ತು ಅರಾಫತ್ ಬೈಕ್ ನಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಮಂಗಳೂರು ನಿಂದ ಉಡುಪಿ‌ ಕಡೆಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ಬಸ್‌ ಚಾಲಕನ ನಿರ್ಲಕ್ಷ್ಯತನದಿಂದ ಯುವಕರಿಗೆ ಢಿಕ್ಕಿ ಹಿಡೆದಿದೆ.

ಘಟನೆಯಿಂದ ಅರಾಫತ್ ಅವರಿಗೆ ಕೈ, ಕಾಲು, ತಲೆಗೆ ಗಂಭೀರ ಗಾಯಗಳಾಗಿದೆ. ಸಾಹಿಲ್ ಅವರೂ ಗಂಭೀರ ಗಾಯಗೊಂಡಿದ್ದು, ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಟಾಪ್ ನ್ಯೂಸ್