ಸುರತ್ಕಲ್; ನದಿಗೆ ಬಿದ್ದು ಯುವಕ ಮೃತ್ಯು

ಸುರತ್ಕಲ್: ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ನಡೆದಿದೆ.

ಮೃತರನ್ನು ಮೂಲತಃ ಬಜ್ಪೆ ನಿವಾಸಿ ಸದ್ಯ ಸುರತ್ಕಲ್‌ ಸಮೀಪದ ಚೊಕ್ಕಬೊಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಾಕಿರ್‌(30) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಾಕಿರ್‌ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದರು. ಈ ವೇಳೆ ಶಾಕಿರ್‌ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನಾಪತ್ತೆಯಾಗಿದ್ದರು.

ತಕ್ಷಣ ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆಕ್ಕೆತ್ತಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು