ಕರಾವಳಿಯಲ್ಲಿ ಮುಂದುವರಿದ ಮಳೆ; ಕಡಿದು ಬಿದ್ದ ವಿದ್ಯುತ್ ತಂತಿ ತುಳಿದು ಯುವಕ ಮೃತ್ಯು

ಸುರತ್ಕಲ್:ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಯುವಕನೋರ್ವ ಆಕಸ್ಮಿಕವಾಗಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ.

ಸಂತೋಷ್ ಮೃತ ಯುವಕ ಎಂದು ಗುರುತಿಸಲಾಗಿದೆ.

ಮಂಗಳವಾರ ತಡರಾತ್ರಿ ಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿತ್ತು.ಆದರೆ ಈ ಬಗ್ಗೆ ಅರಿವಿಲ್ಲದೆ ಮುಂಜಾನೆ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ತಂತಿ ಆಕಸ್ಮಿಕವಾಗಿ ತುಳಿದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಿನ್ನೆ ಉಳ್ಳಾಲ ಬಳಿ ಭಾರೀ ಮಳೆಗೆ ವ್ಯಕ್ತಿಯೋರ್ವರು ಮೋರಿಗೆ ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು.ಇದೀಗ ಕರಾವಳಿಯಲ್ಲಿ ಭಾರೀ ಮಳೆ ಬಳಿಕ ಇಬ್ಬರು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್