ಮಲ್ಲಿಕಾರ್ಜುನ ಖರ್ಗೆ & ಕುಟುಂಬಸ್ಥರ ಹತ್ಯೆಗೆ ಸಂಚು ರೂಪಿಸಲಾಗಿದೆ-ಗಂಭೀರ ಆರೋಪ ಮಾಡಿ ಸುರ್ಜೇವಾಲ ಹೇಳಿದ್ದೇನು?

ಬೆಂಗಳೂರು;ಚುನಾವಣೆಗೆ ಕೇವಲ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿಯ ಸೋಲಿನ ಹತಾಶೆ ಅಪಾಯದ ಹಂತ ತಲುಪಿದ್ದು, ರಾಜ್ಯದ ದಲಿತ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬಸ್ಥರನ್ನು ಹತ್ಯೆಗೈಯ್ಯಲು ಸಂಚು ರೂಪಿಸಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಗಂಭೀರ ಆರೋಪ ಮಾಡಿದ್ದಾರೆ.

ರಾಜಸ್ತಾನದ ಶಾಸಕ ಮದನ್ ದಿಲಾವರ್, ಮಲ್ಲಿಕಾರ್ಜುನ ಖರ್ಗೆ ಅವರ ಸಾವು ಬಯಸಿದ್ದರು. ಈಗ ಅದೇ ಬಿಜೆಪಿಯ ಚಿತ್ತಾಪುರ ಅಭ್ಯರ್ಥಿ ಮಣಿಕಂಠ ರಾಠೋಡ್, ಖರ್ಗೆ ಮತ್ತು ಅವರ ಇಡೀ ಕುಟುಂಬ ಹತ್ಯೆಗೆ ಸಂಚು ರೂಪಿಸಿರುವುದು ಬಹಿರಂಗಗೊಂಡಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಇದು ಕೇವಲ ಖರ್ಗೆ ಅವರ ಮೇಲೆ ನಡೆಸುವ ಹಲ್ಲೆ ಅಲ್ಲ; ಇಡೀ ಕನ್ನಡಿಗರ ಸ್ವಾಭಿಮಾನ ಮತ್ತು ಅಸ್ಮಿತೆಯ ಕೊಲೆ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿ ಅವರ ಆತ್ಮೀಯ ನೀಲಿ ಕಂಗಳ ಹುಡುಗ ಹಾಗೂ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರ ಆಡಿಯೋದಲ್ಲಿ ಈ ಸಂಚು ಸ್ಪಷ್ಟವಾಗಿದೆ.

ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ಕನ್ನಡನಾಡಿನ ಮಗ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ದ್ವೇಷ ಕಾರುತ್ತಲೆ ಬಂದಿದೆ. ಖರ್ಗೆ ಅವರು ದಲಿತ ಹಾಗೂ ಕಾರ್ಮಿಕ ಕುಟುಂಬದಲ್ಲಿ ಜನಿಸಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದವರೆಗೆ ಬೆಳೆದು ಬಂದಿರುವುದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಖರ್ಗೆ ಅವರ ವಿರುದ್ಧ ಸಂಚು ರೂಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com