ಟರ್ಕಿ;7.8 ತೀವ್ರತೆಯ ಭೂಕಂಪವು ಟರ್ಕಿಯನ್ನು ಬೆಚ್ಚಿಬೀಳಿಸಿದೆ.ಇದರ ಬೆನ್ನಲ್ಲೇ ಮತ್ತೊಂದು ಪ್ರಬಲ ಭೂಕಂಪವು ಪ್ರದೇಶದ ಹಲವಾರು ಪ್ರಾಂತ್ಯಗಳಲ್ಲಿ ಸಂಭವಿಸಿದೆ.ಹಲವಾರು ಕಟ್ಟಡಗಳು ನೆಲಸಮವಾಗಿವೆ ಎಂದು ವರದಿಗಳು ತಿಳಿಸಿವೆ.
ನೂರ್ಡಗಿ ಪಟ್ಟಣದಿಂದ ಸುಮಾರು 26 ಕಿಲೋಮೀಟರ್ (16 ಮೈಲಿ) ದೂರದಲ್ಲಿರುವ ಗಾಜಿಯಾಂಟೆಪ್‌ನಿಂದ 33 ಕಿಲೋಮೀಟರ್ (20 ಮೈಲಿ) ದೂರದಲ್ಲಿ ಭೂಕಂಪನ ಕೇಂದ್ರೀಕೃತವಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. US ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ ಇದು 18 ಕಿಲೋಮೀಟರ್ (11 ಮೈಲಿ) ಆಳದಲ್ಲಿ ಕೇಂದ್ರೀಕೃತವಾಗಿತ್ತು.
ಟರ್ಕಿ, ಸಿರಿಯಾ ಎರಡು ದೇಶಗಳ ನಡುವಿನ ಗಡಿಯ ಸಮೀಪ ಆಗ್ನೇಯ ಟರ್ಕಿಯಲ್ಲಿ ಇಂದು ಬೆಳಗ್ಗೆ 7.8 ತೀವ್ರತೆಯ ಭೂಕಂಪ ಸಂಭವಿಸಿದೆ.
ಅಲೆಪ್ಪೊ, ಲಟಾಕಿಯಾ, ಹಮಾ ಮತ್ತು ಟಾರ್ಟಸ್ ಪ್ರಾಂತ್ಯಗಳಲ್ಲಿ ನೂರಾರು ಸಾವುಗಳು ದಾಖಲಾಗಿದೆ.
ಸಾವು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕಟ್ಟಡಗಳಡಿ ಮೃತದೇಹಗಳು ಪತ್ತೆಯಾಗುತ್ತಿದೆ. ಕಳೆದುಕೊಂಡ ಜನ ರೋಧನ ಮುಗಿಲುಮುಟ್ಟಿದೆ.ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.
ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿವೆ.ಮಲಗಿದ್ದ ಜನರು ಭೂಕಂಪನದಿಂದ ತಪ್ಪಿಸಿಕೊಳ್ಳಲು ಅವಕಾಶ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟರ್ಕಿಯಲ್ಲಿ 284 ಮಂದಿ ನಾಗರಿಕರು ಮೃತಪಟ್ಟಿದ್ದು, 8000 ಮಂದಿ ಗಾಯಗೊಂಡಿದ್ದಾರೆ. ಸಿರಿಯಾದಲ್ಲಿ ಕೂಡ 250ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಸಾವಿರಾರು ಜನರು ಗಾಯಗೊಂಡಿದ್ದಾರೆ.
ಸ್ಥಳೀಯ ಕಾಲಮಾನ ಪ್ರಕಾರ ಇಂದು ಮುಂಜಾನೆ 4.17ರ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದೆ. ಮೊದಲ ಭೂಕಂಪನ 6.7ರಷ್ಟು ತೀವ್ರತೆಯಲ್ಲಿ ದಾಖಲಾಗಿದ್ದು, 15 ನಿಮಿಷಗಳ ನಂತರ ಮತ್ತೊಂದು ಮತ್ತು ಅದಕ್ಕಿಂತ ಭೀಕರ ಭೂಕಂಪನ ಸಂಭವಿಸಿದೆ.