ಉಳ್ಳಾಲ:ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಸ್ ಡಿಪಿಐ ಅಭ್ಯರ್ಥಿಗೆ ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಇಬ್ಬರು ಸದಸ್ಯರನ್ನು ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿಗೆ ಬಹುಮತ ಇದ್ದ ಕಾರಣ ಸತ್ಯರಾಜ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನಿಲ್ಲಿಸಲಾಗಿತ್ತು.ಆದರೆ ಬಿಜೆಪಿ ಬೆಂಬಲಿತ ಸದಸ್ಯರಾದ ಮುಹಮ್ಮದ್ ಫಯಾಝ್ ಮತ್ತು ಮುಹಮ್ಮದ್ ಅವರು ಎಸ್ ಡಿಪಿಐ ನಾಯಕರ ಆಮಿಷಕ್ಕೆ ಒಳಗಾಗಿ ಅಡ್ಡ ಮತದಾನ ಮಾಡುವ ಮೂಲಕ ಎಸ್ ಡಿಪಿಐ ಗೆಲುವಿಗೆ ಕಾರಣರಾಗಿದ್ದಾರೆ.
ಇದನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಇಬ್ಬರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.