ತಮಿಳುನಾಡು;ಬಿಜೆಪಿಯ 13 ಮುಖಂಡರು ಪಕ್ಷ ತೊರೆದು AIADMK ಪಕ್ಷವನ್ನು ಸೇರುತ್ತಿದ್ದಾರೆ.
ಪಕ್ಷದ ಮುಖಂಡರ ರಾಜೀನಾಮೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈಗೆ ಹಿನ್ನೆಡೆಯನ್ನುಂಟು ಮಾಡಿದೆ.
ಈ ಬಗ್ಗೆ ಬಿಜೆಪಿ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಅನ್ಬರಸನ್ ಮಾತನಾಡಿ,ಹಲವು ವರ್ಷಗಳಿಂದ ಬಿಜೆಪಿಗಾಗಿ ದುಡಿದಿದ್ದೇನೆ.ನಾನು ಯಾವುದೇ ಹುದ್ದೆಗೆ ಆಕಾಂಕ್ಷಿಯಲ್ಲ.ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿನ ಅಸಹಜ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ.
ಕಳೆದ ಕೆಲ ದಿನಗಳಿಂದ ಬಿಜೆಪಿ ನಾಯಕರ ರಾಜೀನಾಮೆ ತಮಿಳುನಾಡು ಬಿಜೆಪಿಯಲ್ಲಿ ಬಿರುಗಾಳಿ ಬೀಸಿದೆ.ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರ ನಾಯಕತ್ವದ ಬಗೆಗಿನ ಅಸಮಾಧಾನದಿಂದ ಪಕ್ಷ ತೊರೆದಿದ್ದಾರೆ ಎನ್ನಲಾಗಿದೆ.