ಸುರತ್ಕಲ್: ಭೀಕರ ಅಪಘಾತ, ಓರ್ವ ಮೃತ್ಯು

ಸುರತ್ಕಲ್: ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೊಸಬೆಟ್ಟು ಬಳಿ ನಡೆದಿದೆ.

ಮೃತಪಟ್ಟವರನ್ನು ತಮಿಳುನಾಡು ಮೂಲದ ಅರ್ಜುನ್ ಎಂದು ಗುರುತಿಸಲಾಗಿದೆ.

ಅರ್ಜುನ್ ಬೆಳಗ್ಗಿನ ಜಾವ ಮಂಗಳೂರು ಕಡೆಯಿಂದ ಸುರತ್ಕಲ್ ಕಡೆಗೆ ಫಾರ್ಚುನರ್ ಕಾರಿನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಹೊಸಬೆಟ್ಟು ಪೆಟ್ರೋಲ್ ಬಂಕ್ ನ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಈಚರ್ ಟಿಪ್ಪರ್ ಲಾರಿಗೆ ಕಾರು ಢಿಕ್ಕಿ ಹೊಡೆದಿದೆ. ಘಟ‌ನೆಯಲ್ಲಿ ಅರ್ಜುನ್ ಅವರ ತಲೆಗೆ ಗಂಭೀರವಾಗಿ ಗಾಯಗೊಂಡ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅವರೊಂದಿಗೆ ಕಾರಿನಲ್ಲಿ ಸಂಚರಿಸುತ್ತಿದ್ದ ಮುಹಮ್ಮದ್ ಫಿಝಾನ್ ಮತ್ತು ಅನಿರುದ್ಧ್ ನಾಯರ್ ಅವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್