ತಮಿಳುನಾಡು; ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹುಟ್ಟುಹಬ್ಬದ ಹಿನ್ನೆಲೆ ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ಉಡುಗೊರೆಯಾಗಿ ನೀಡಲಿದ್ದಾರೆ ಎನ್ನಲಾಗಿದೆ.
ಎಂಕೆ ಸ್ಟಾಲಿನ್ ಮಾರ್ಚ್ 1 ರಂದು 70ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಎಂಕೆ ಪಕ್ಷ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದೆ.
ಮಾರ್ಚ್ ಒಂದುರಂದು ತಮಿಳುನಾಡಿನಲ್ಲಿ ಹುಟ್ಟಿದ ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನ ಉಡುಗೊರೆಯಾಗಿ ನೀಡಲಿದ್ದಾರೆ ಎನ್ನಲಾಗಿದೆ.
ಈ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, ಚೆನ್ನೈನಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಲು ತೀರ್ಮಾನಿಸಲಾಗಿದೆ.