ಕಾಂಗ್ರೆಸ್ ಸೇರ್ಪಡೆ ಸುದ್ದಿ ಬಗ್ಗೆ ತೇಜಸ್ವಿನಿ ಅನಂತ್ ಕುಮಾರ್ ಹೇಳಿದ್ದೇನು ಗೊತ್ತಾ?

ಬೆಂಗಳೂರು;ಕಾಂಗ್ರೆಸ್ ಪಕ್ಷ ಸೇರ್ಪಡೆಯ ಸುದ್ದಿಯ ಬಗ್ಗೆ
ದಿ.ಅನಂತ್‌ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರು ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿಯಲ್ಲಿದ್ದೇನೆ.ಅನಂತ್ ಕುಮಾರ್ ಕಟ್ಟಿ ಬೆಳೆಸಿದ ಪಕ್ಷ ಬಿಜೆಪಿ.ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ.ಇತ್ತೀಚಿನ ದಿನಗಳಲ್ಲಿ ಯಾರೋ ಏನೋ ಮಾತನಾಡುತ್ತಾರೆ.ಸೋಷಿಯಲ್ ಮೀಡಿಯಾಗಳ ಮೂಲಕ ನಾವು ಹೇಳಿದ ವಿಷಯ ಒಂದಾದ್ರೆ, ಅದು ಗುರಿ ತಲುಪುವ ವೇಳೆಗೆ ಬೇರೆ ವಿಷಯ ಬದಲಾಗಿರುತ್ತೆ.ನಾನು ಪಕ್ಷದ ಜೊತೆ ಇದ್ದೇನೆ, ಪಕ್ಷನು ಕೂಡ ನನ್ನ ಜೊತೆ ಇದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಸೇರ್ಪಡೆ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.

ನಾವು ಬಿಜೆಪಿ ಪಕ್ಷದ ಜೊತೆ ಸದಾ ಇದ್ದವರು. ಸೈದ್ಧಾಂತಿಕವಾಗಿ ನಾನು ಬಿಜೆಪಿ ಸಿದ್ಧಾಂತ ಜೊತೆ ಬದ್ಧವಾಗಿದ್ದೇನೆ ಎಂದು ಹೇಳುವ ಮೂಲಕ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಟಾಪ್ ನ್ಯೂಸ್