ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಯಿಂದ ನೊಂದುಕೊಂಡಿದ್ದಾರಾ? ಡೆಲ್ಲಿಗೆ ಹೋಗಿ ಪ್ರಧಾನಿ ಮೋದಿಗೆ ಭೇಟಿ

ನವದೆಹಲಿ:ಬಿಜೆಪಿಯ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್​ ಕುಮಾರ್​ ಇದೀಗ ಪ್ರಧಾನಿ ಮೋದಿಯನ್ನು ದೆಹಲಿಯ ಸಂಸತ್ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಕೆಲ ದಿನಗಳಿಂದ ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಯ ನಡೆಗಳಿಂದ ನೊಂದುಕೊಂಡಿದ್ದಾರೆ.ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಹಾರುತ್ತಾರಾ ಎನ್ನವ ರೀತಿಯ ಊಹಾಪೋಹಗಳು ಹರಿದಾಡುತ್ತಿದ್ದವು.ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಈ ಹಿಂದೆ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾಡಿದ್ದ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿತ್ತು.ತಮ್ಮ ಪತಿ ಅನಂತಕುಮಾರ್‌, ಲಾಲ್‌ಬಾಗ್‌ನಲ್ಲಿ ನೆಟ್ಟ ಗಿಡ ಬಾಡಿ ಹೋಗಿರುವ ಬಗ್ಗೆ ಟ್ವೀಟ್ ಮಾಡಿದ್ದರು.ಅನಂತಕುಮಾರ್ ಅವರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು ಎಂಬುದು ನನ್ನ ಭಾವನೆ ಎಂದಿದ್ದರು. ಇದಕ್ಕೂ ಹಲವು ಅರ್ಥಗಳನ್ನು ಕಲ್ಪಿಸಲಾಗಿತ್ತು.

ಕಳೆದ ಲೋಕಸಭೆ ಚುನಾವಣೆಯಲ್ಲಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ.ವಿಧಾನಸಭೆ ಚುನಾವಣೆಯಲ್ಲ್ಲೂ ಅವಕಾಶ ಸಿಗಲಿಲ್ಲ.ಈ ಹಿನ್ನೆಲೆ ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ತೇಜಸ್ವಿನಿ ಅಸಮಾಧಾನ ತೋಡಿ ಕೊಂಡಿದ್ದಾರೆ ಎನ್ನಲಾಗಿದೆ.

ಇದಕ್ಕೂ ಮೊದಲು ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ.ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ ಎಂದು ಕೂಡ ಟ್ವೀಟ್ ಮಾಡಿದ್ದರು.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು