ಉಡುಪಿ; ಮ‌ನೆಯಿಂದಲೇ ಮತದಾನ ಮಾಡಿದ್ದ ವ್ಯಕ್ತಿ ಫಲಿತಾಂಶ ಬರುವ ಮೊದಲೇ ಮೃತ್ಯು

ಉಡುಪಿ;ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆ ಮನೆಯಿಂದಲೇ ಮತದಾನ ಮಾಡಿದ್ದ ವ್ಯಕ್ತಿ ಫಲಿತಾಂಶ ಬರುವ ಮೊದಲೇ ಮೃತಪಟ್ಟಿರುವ ಘಟನೆ ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದಿದೆ.

ನಿವೃತ್ತ ಶಿಕ್ಷಕ ಮಾಲಾಡಿ ಗುರುರಾಜ ಭಟ್‌ (94) ಅವರು ಎ.30 ರಂದು ಮನೆಯಿಂದಲೇ ತಮ್ಮ ಹಕ್ಕನ್ನು ಚಲಾಯಿಸಿದ್ದು, ಮೇ 3 ರಂದು ಅಸೌಖ್ಯದಿಂದ ನಿಧನ ಹೊಂದಿದ್ದಾರೆ.

ಇವರ ಮಕ್ಕಳೆಲ್ಲ ಹೊರ ಜಿಲ್ಲೆಗಳಲ್ಲಿ ಉದ್ಯೋಗದಲ್ಲಿರುವ ಹಿನ್ನೆಲೆಯಲ್ಲಿ ಮತಗಟ್ಟೆಯೆಡೆಗೆ ಬಂದು ಮತ ಚಲಾಯಿಸಲು ಕಷ್ಟಸಾಧ್ಯವಾದ ಪರಿಣಾಮ ಮನೆಯಿಂದಲೇ ಮತದಾನ ಮಾಡುವುದಾಗಿ ನೋಂದಾಯಿಸಿಕೊಂಡಿದ್ದರು.ಅದರಂತೆ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬಂದಿಗಳು ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದರು.

ತಮ್ಮ ಹಕ್ಕು ಚಲಾಯಿಸಿದ್ದ ಎರಡೇ ದಿನಕ್ಕೆ ಮಾಲಾಡಿ ಗುರುರಾಜ ಭಟ್‌ ಅವರು ಫಲಿತಾಂಶ ಬರುವ ಮೊದಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com