ಭಾರತದಲ್ಲೂ ತಾಲಿಬಾನ್ ನಂತಹ ಭಯಾನಕ ಪರಿಸ್ಥಿತಿ ಸೃಷ್ಟಿಯಾಗಲಿದೆ ಎಚ್ಚರಿಕೆ ನೀಡಿದ ತೆಲಂಗಾಣ ಸಿಎಂ

ಹೈದರಾಬಾದ್:ಬಿಜೆಪಿ ಸರ್ಕಾರ ಮತಾಂಧತೆ ಉತ್ತೇಜಿಸಿದರೆ, ಸಮುದಾಯಗಳನ್ನು ಒಡೆಯುವ ಕೆಲಸ ಮಾಡಿದರೆ ಭಾರತದಲ್ಲೂ ತಾಲಿಬಾನ್ ನಂತಹ ಭಯಾನಕ ಪರಿಸ್ಥಿತಿ ಸೃಷ್ಟಿಯಾಗುತ್ತದೆ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಎಚ್ಚರಿಕೆ ನೀಡಿದ್ದಾರೆ.

ಮಹಬೂಬಾಬಾದ್ ಜಿಲ್ಲೆಯಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ಕಚೇರಿ ಮತ್ತು ಸಮಗ್ರ ಜಿಲ್ಲಾ ಕಚೇರಿಗಳ ಸಂಕೀರ್ಣವನ್ನು ಉದ್ಘಾಟಿಸಿದ ನಂತರ ಅವರು ಮಹಬೂಬಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ರಾಷ್ಟ್ರದ ಪ್ರಗತಿಗಾಗಿ, ಎಲ್ಲಾ ನಾಗರಿಕರ ಯೋಗಕ್ಷೇಮವನ್ನು ಖಾತರಿಪಡಿಸಬಹುದಾದ ಶಾಂತಿ ಮತ್ತು ಸೌಹಾರ್ದತೆ ಜನರಿಗೆ ಬೇಕು ಎಂದು ಅವರು ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಚಂದ್ರಶೇಖರ ರಾವ್, ಈ ದ್ವೇಷದಿಂದ ದೇಶದ ಜೀವನಾಡಿಯೇ ಸುಟ್ಟು ಭಸ್ಮವಾಗುವ ಸಂದರ್ಭ ಎದುರಾಗಲಿದೆ.ಆದ ಕಾರಣ ವಿಶೇಷವಾಗಿ ಯುವಕರು ಜಾಗೃತರಾಗಬೇಕು ಎಂದು ಕರೆ ನೀಡಿದ್ದಾರೆ.

ಕೇಂದ್ರದ ಈ ಅಸಮರ್ಥ ನೀತಿಗಳಿಂದಾಗಿ ತೆಲಂಗಾಣ ರಾಜ್ಯವೊಂದರಲ್ಲೇ 3 ಲಕ್ಷ ಕೋಟಿ ನಷ್ಟವಾಗಿದೆ. ಅರ್ಥಶಾಸ್ತ್ರಜ್ಞರು ಅಂಕಿ-ಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ. ಮಾಹಿತಿ ಪ್ರಕಾರ, ಜಿಎಸ್ಡಿಪಿ 14.50 ಲಕ್ಷ ಕೋಟಿ ಇರಬೇಕಿತ್ತು. ಆದರೆ 11.50 ಲಕ್ಷ ಕೋಟಿಗೆ ತಲುಪಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್