ತೊಕ್ಕೊಟ್ಟು; ನಿಯಂತ್ರಣ ತಪ್ಪಿದ ಕಾರು ಪಲ್ಟಿ;ನಾಲ್ವರಿಗೆ ಗಂಭೀರ ಗಾಯ

ತೊಕ್ಕೊಟ್ಟು;ಕಾರೊಂದು ಅಪಘಾತಕ್ಕೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ನಡೆದ ಬಗ್ಗೆ ವರದಿಯಾಗಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ಹರಿದು ಬಳಿಕ ರಸ್ತೆಯಲ್ಲೇ ಉರುಳಿಬಿದ್ದಿದೆ.

ಕಾರು ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟಿನತ್ತ ಸಂಚರಿಸುತ್ತಿತ್ತು ಎಂದು ಹೇಳಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್