ವಿಟ್ಲ;ದಲಿತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ, ಮೂವರ ಬಂಧನ

ಬಂಟ್ವಾಳ:ದಲಿತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬೆರಿಪದವಿನ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ(28) ಬಂಧಿತರಾಗಿದ್ದಾರೆ.

ಅಕ್ಷಯ್ ಪೈಟಿಂಗ್ ಕೆಲಸ, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ಮಾಡುತ್ತಿದ್ದರು.

ಆರೋಪಿಗಳು ಬಾಲಕಿಗೆ ವಿವಾಹವಾಗುವುದಾಗಿ ಸುಳ್ಳು ಹೇಳಿ ಬೇರೆ ಬೇರೆ ದಿನಗಳಲ್ಲಿ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ಈ ಕುರಿತು ವಿಟ್ಲ ಠಾಣೆಯಲ್ಲಿ ಪೊಕ್ಸೋ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ‌‌.

ಟಾಪ್ ನ್ಯೂಸ್