ಬೈಕ್ ಗೆ ಕಾರು ಢಿಕ್ಕಿ; ದಂಪತಿ ಸ್ಥಳದಲ್ಲೇ ಮೃತ್ಯು

ಬೈಕ್ ಗೆ ಕಾರು ಢಿಕ್ಕಿ; ದಂಪತಿ ಸ್ಥಳದಲ್ಲೇ ಮೃತ್ಯು

ತುಮಕೂರು:ಬೈಕ್‌ಗೆ ಕಾರು ಡಿಕ್ಕಿಯಾಗಿ ದಂಪತಿ ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಬಳಿ ನಡೆದಿದೆ.

ತುಮಕೂರಿನ ಅಶೋಕನಗರದ ನಿವಾಸಿಗಳಾದ ಶ್ರೀಹರ್ಷ(55 )ಹಾಗೂ ಪತ್ನಿ ಚಂದ್ರಕಲಾ (50) ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ದಂಪತಿ.

ತುಮಕೂರಿನ ಕಳ್ಳಂಬೆಳ್ಳದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಇವರಿಬ್ಬರು ಬೈಕ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 4ರ ಮಾರುತಿ ಡಾಬಾ ಬಳಿ ಸಾಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.

ಈ ಕುರಿತು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರದಲ್ಲಿ ಬೈಕ್‌ಗೆ ಲಾರಿ ಡಿಕ್ಕಿ, ಬೈಕ್ ಸವಾರ ಸಾವು

ವಿಜಯಪುರ:ನಿಯಂತ್ರಣ ತಪ್ಪಿದ ಲಾರಿ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಬಳಿ ನಡೆದಿದೆ.

ಬೈಕ್ ಸವಾರ ಮಲಕಾರಿ ಖಂಡಪ್ಪ ತೋರತೆ(33) ಮೃತರು.

ಚಾಲಕನ ನಿಯಂತ್ರಣ ತಪ್ಪಿ ಲಾರಿ ವೇಗವಾಗಿ ಬಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.ಈ ಕುರಿತು ಝಳಕಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com