ತುಮಕೂರು;ನಾಪತ್ತೆಯಾಗಿದ್ದ ಒಂದೇ ಗ್ರಾಮದ ನಾಲ್ವರು ಮಕ್ಕಳನ್ನು ನಿನ್ನೆ ಪೊಲೀಸರು ಪತ್ತೆ ಮಾಡಿದ್ದಾರೆ.
ಹಾಸನದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಾಪತ್ತೆಯಾಗಿದ್ದ ಹಾಸನದ ಮಕ್ಕಳನ್ನು ಪಟ್ಟನಾಯಕನಹಳ್ಳಿ ಪೊಲೀಸರು ರಕ್ಷಿಸಿದ್ದಾರೆ.
ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಸೇರಿ ನಾಲ್ವರಲ್ಲಿ ಓರ್ವ ಬಾಲಕಿ ಅಪ್ರಾಪ್ತ ಪಿಯುಸಿ ವಿದ್ಯಾರ್ಥಿಯನ್ನು ಪ್ರೀತಿಸುತ್ತಿದ್ದಳು. ಅವರು ಒಟ್ಟಾಗಿ ಹುಟ್ಟುಹಬ್ಬ ಆಚರಣೆಗೆ ಮುಂದಾಗಿದ್ದಾರೆ.ಇದರಿಂದ ಬೆಂಗಳೂರಿಗೆ ಹೋಗಿದ್ದಾರೆ ಎನ್ನಲಾಗಿದೆ.
ತಮ್ಮಿಬ್ಬರ ಪ್ರೀತಿಗೆ ಸಹಾಯ ಮಾಡಿದಕ್ಕೆ ಮೂವರು ಮಕ್ಕಳನ್ನು ಬಾಲಕಿ ತನ್ನ ಜತೆಯಲ್ಲೇ ಬೆಂಗಳೂರಿಗೆ ಕರೆದೊಯ್ದಿದ್ದಾಳೆ.ಬಳಿಕ ಬೆಂಗಳೂರಿನಿಂದ ಹಾಸನಕ್ಕೆ ತೆರಳಿದ್ದರು ಎನ್ನುವುದು ತನಿಖೆ ವೇಳೆ ಬಹಿರಂಗವಾಗಿದೆ.
ಇದೀಗ ಪೊಲೀಸರ ಸತತ ಪ್ರಯತ್ನದಿಂದ ನಾಲ್ವರು ಮಕ್ಕಳನ್ನು ಪೊಲೀಸರು ಪತ್ತೆ ಮಾಡಿ ನಿಟ್ಟುಸಿರು ಬಿಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದ ಒಂದೇ ಮನೆಯ ನಾಲ್ವರು ಮಕ್ಕಳು ಕಳೆದ ಶನಿವಾರದಂದು ನಾಪತ್ತೆಯಾಗಿದ್ದರು.ಈ ಬಗ್ಗೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಪಟ್ಟನಾಯಕಹಳ್ಳಿ ಡಿವೈಎಸ್ಪಿ ನವೀನ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನಾಗಿ ರಚನೆ ಮಾಡಿ ಪೊಲೀಸರು ಮಕ್ಕಳ ಪತ್ತೆ ಕಾರ್ಯ ನಡೆಸಿ ಹಾಸನದಲ್ಲಿ ಪತ್ತೆ ಹಚ್ಚಿದ್ದರು.