ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ; ರಾಜ್ಯವನ್ನೇ ಬೆಚ್ಚಿಬೀಳಿಸಿದ ಸುದ್ದಿ
ತುಮಕೂರು:ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಡೆದಿದೆ.
ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ಕಣ್ಮರೆಯಾದ ಮಕ್ಕಳು.ಮಕ್ಕಳು ಶನಿವಾರ ಮಧ್ಯಾಹ್ನ ಆಟ ಆಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿಲ್ಲ.
ನಾಪತ್ತೆಯಾಗಿರುವ ಎಲ್ಲ ಮಕ್ಕಳು 15-16 ವರ್ಷದ ವಯಸ್ಸಿನವರಾಗಿದ್ದಾರೆ. 4 ಮಕ್ಕಳು ನಾಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟಿಹಾಕಿದೆ.
ಸದ್ಯ ಘಟನೆ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಇಳಿದಿದ್ದಾರೆ.ಗಾಬರಿಗೊಂಡ ಪೋಷಕರು ಕೂಡ ಎಲ್ಲಾ ಕಡೆ ಹುಡುಕಾಟ ನಡೆಸುತ್ತಿದ್ದಾರೆ.ಪೋಷಕರು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಾಪತ್ತೆಯಾದವರಲ್ಲಿ ಮಂಜುಳಾ-ಮಧು ಕುಮಾರ್ ಟ್ವಿನ್ಸ್ ಮಕ್ಕಳು.ಮಕ್ಕಳು ಬೆಂಗಳೂರಿಗೆ ಹೋಗಿರುವ ಬಗ್ಗೆ ಮಾಹಿತಿ ಇದೆ ಎನ್ನಲಾಗಿದೆ. ಬೆಂಗಳೂರಿಗೆ ಯಾಕೆ ಹೋದರೂ ಯಾರು ಇವರನ್ನು ಕರೆಸಿಕೊಂಡರೆಂಬ ಮಾಹಿತಿ ಇನ್ನೂ ತಿಳಿದುಬಂದಿಲ್ಲ.
ಪೊಲೀಸರು ಶೋಧ ನಡೆಸುತ್ತಿದ್ದು,ಮಕ್ಕಳು ಸಿಕ್ಕ ಬಳಿಕವಷ್ಟೇ ಸತ್ಯ ಹೊರಬರಲಿದೆ.ಮಕ್ಕಳ ನಾಪತ್ತೆಯಿಂದ ಗಾಬರಿಗೊಂಡ ಪೋಷಕರು ಕೂಡ ಕಣ್ಣೀರು ಹಾಕುತ್ತಿದ್ದಾರೆ.ಮಕ್ಕಳು ಏನೂ ತೊಂದರೆಯಾಗದೆ ವಾಪಸ್ಸು ಬರಲಿ ಎಂದು ಜನರು ಪ್ರಾರ್ಥನೆ ನಡೆಸುತ್ತಿದ್ದಾರೆ.