ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ; ಡೆತ್ ನೋಟು ಆಧಾರದಲ್ಲಿ ಐವರು ಪೊಲೀಸ್ ವಶಕ್ಕೆ

ತುಮಕೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ಆಧಾರದಲ್ಲಿ ಐವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.

ಶಿರಾ ತಾಲೂಕಿನ ಲಕ್ಕನಹಳ್ಳಿಯ ಗರೀಬ್ ಸಾಬ್(36) ಮತ್ತು ಪತ್ನಿ ಸುಮಯ್ಯಾ (32) ಮಕ್ಕಳಾದ ಹಾಜಿರಾ (14) ಮುಹಮ್ಮದ್ ಶುಭಾನ್ (10) ಹಾಗೂ ಮುಹಮ್ಮದ್ ಮುನೀರ್ (8) ಆತ್ಮಹತ್ಯೆ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದ್ದರು.

ವರದಿಯ ಪ್ರಕಾರ ಪತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮಕ್ಕಳ ಮೃತದೇಹ ಹಾಸಿಗೆ ಮೇಲೆ ಕಂಡು ಬಂದಿದೆ.ದಂಪತಿ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು.

ಜಿಲ್ಲಾ ಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್,ಆತ್ಮಹತ್ಯೆಯ ಹಿಂದೆ ಬಡ್ಡಿ ವ್ಯವಹಾರ ಇದೆ ಎಂದು ಜನರು ಮಾತನಾಡುತ್ತಿದ್ದಾರೆ. ಅದನ್ನು ಗಂಭೀರವಾಗಿ ತೆಗದುಕೊಂಡು, ಬಡ್ಡಿ ವ್ಯವಹಾರವನ್ನು ನಿಲ್ಲಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಬಡ್ಡಿ ವ್ಯವಹಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ತನಿಖೆಯ ನಂತರ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿಯಲಿದೆ ಎಂದು ಹೇಳಿದ್ದಾರೆ.

ಈಗಾಗಲೇ ಮೀಟರ್ ಬಡ್ಡಿ ದಂಧೆ ನಡೆಸುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ.ಇಂತಹ ಘಟನೆ ಮತ್ತೆ ನಡೆಯಬಾರದು.ಇದನ್ನು ತಡೆಯುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್