ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಇಬ್ಬರು ಬಾಲಕರು ಮೃತ್ಯು
ತುಮಕೂರು:ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.
ನಿತೇಶ್(14), ಪ್ರಜ್ವಲ್(13) ಮೃತ ದುರ್ದೈವಿಗಳು.
ಬಾಲಕರು ಮನೆ ಮೇಲೆ ಆಟವಾಡುತ್ತಿದ್ದಾಗ ತಂತಿ ತಗುಲಿ ಈ ದುರಂತ ಸಂಭವಿಸಿದ್ದು, ಕೆಇಬಿ ವಿರುದ್ಧ ಗ್ರಾಮಸ್ಥರು ಹಾಗೂ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮನೆಯ ಟೆರೇಸ್ ಗೆ ಹೊಂದಿಕೊಂಡೇ ವಿದ್ಯುತ್ ತಂತಿ ಹಾದು ಹೋಗಿದ್ದು, ಇಂದು ಬೆಳಗ್ಗೆ ಟೆರೇಸ್ ನಲ್ಲಿ ಆಡುತ್ತಿದ್ದ ಯತೀಶ್ ಹಾಗೂ ಪ್ರಜ್ವಲ್ ಗೆ ಆಕಸ್ಮಿಕವಾಗಿ ವಿದ್ಯುತ್
ಆಘಾತ ಉಂಟಾಗಿದೆ.
ಘಟನೆಯಲ್ಲಿ ವಿದ್ಯುತ್ ಆಘಾತಕ್ಕೆ ಒಳಗಾದ ಇಬ್ಬರು ಬಾಲಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.ಬಾಲಕರ ಸಾವಿಗೆ ಬೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.