ಆಟವಾಡುವಾಗ ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು

ಆಟವಾಡುವಾಗ ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು

ತುಮಕೂರು:ಆಟವಾಡುತ್ತಿದ್ದ ವೇಳೆ ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಕುಣಿಗಲ್ ಪಟ್ಟಣದಲ್ಲಿ ವರದಿಯಾಗಿದೆ.

ಋತ್ವಿಕ್‌ (10) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.

ರವಿವಾರ ರಾತ್ರಿ ಮನೆ ಸಮೀಪ ಆಟ ಆಡುತ್ತಿದ್ದ ವೇಳೆ ಋತ್ವಿಕ್ ಸಮೀಪದಲ್ಲಿದ್ದ ವಿದ್ಯುತ್ ತಂತಿಯನ್ನು ಮೆಟ್ಟಿದ್ದ. ಆಗ ವಿದ್ಯುತ್ ಪ್ರವಹಿಸಿ ದುರಂತ ಸಂಭವಿಸಿದೆ.

ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು.ಈ ಕುರಿತು ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್