ಪ್ರೀತಿಸಿದ ಬಾಲಕಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಆತ್ಮಹತ್ಯೆ ಮಾಡಿಕೊಂಡ ಯುವಕ!

ಪ್ರೀತಿಸಿದ ಬಾಲಕಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಆತ್ಮಹತ್ಯೆ ಮಾಡಿಕೊಂಡ ಯುವಕ!

ತುಮಕೂರು;ಪ್ರಿಯತಮೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಬಳಿಕ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕನಾಯಕನಹಳ್ಳಿ ಹುಳಿಯಾರು ಪ್ರದೇಶ ಯಳನಾಡು ಗ್ರಾಮದಲ್ಲಿ ನಡೆದಿದೆ.

ತುಮಕೂರಿನ 26 ವರ್ಷದ ವಿನಯಕುಮಾರ್ ಆತ್ಮಹತ್ಯೆಗೆ ಶರಣಾದ ಯುವಕ. ಮೃತ ವಿನಯಕುಮಾರ್ ಅದೇ ಗ್ರಾಮದ ಕಲ್ಲೇಗೌಡರ ಪುತ್ರಿ 17 ವರ್ಷದ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದನು.

ಅಪ್ರಾಪ್ತೆ ದೊಡ್ಡಬಿದರೆ ಗ್ರಾಮದ ನಿವಾಸಿಯಾಗಿದ್ದು, ತಾಯಿ ಜೊತೆ ಭಟ್ಟರಹಳ್ಳಿಯ ಅಜ್ಜಿ ಮನೆಯಲ್ಲಿ ವಾಸವಾಗಿದ್ದಳು. ದ್ವಿತೀಯ ಪಿಯುಸಿ ಉತ್ತೀರ್ಣಳಾಗಿದ್ದ ಅಪ್ರಾಪ್ತೆಗೆ ವಿನಯಕುಮಾರ್ ಜೊತೆ ಪ್ರೀತಿ ಇತ್ತು ಎನ್ನಲಾಗಿದೆ.

ವಿನಯಕುಮಾರ್ ಗ್ರಾಮದ ಸಿದ್ದರಾಮೇಶ್ವರ ದೇವಸ್ಥಾನದಲ್ಲಿ ಅರ್ಚಕನಾಗಿ ಕೆಲಸ ಮಾಡಿಕೊಂಡಿದ್ದನು. ಕಳೆದ ಕೆಲವು ದಿನಗಳಿಂದ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು.ಇದರಿಂದ ಆಕೆ ದೂರವಾಗಿದ್ದಳು.

ಇದರಿಂದ ಕೋಪಗೊಂಡಿದ್ದ ವಿನಯಕುಮಾರ್ ನಿನ್ನೆ ಬೆಳಗಿನ ಜಾವ ಆಕೆಯ ಮನೆಗೆ ನುಗ್ಗಿದ್ದಾನೆ. ಮಚ್ಚಿನಿಂದ ಪ್ರೇಯಸಿ ಮೇಲೆ ಹಲ್ಲೆ ಮಾಡಿ ಬಳಿಕ ಪರಾರಿಯಾಗಿದ್ದಾನೆ.
ಗಾಯಾಳು ಬಾಲಕಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಲ್ಲೆ ನಡೆಸಿದ ನಂತರ ಪರಾರಿಯಾಗಿದ್ದ ವಿನಯ್‌ಕುಮಾರ್‌ಗಾಗಿ ಗ್ರಾಮಸ್ಥರು ಹುಡುಕಾಟ ನಡೆಸಿದ್ದರು. ಗ್ರಾಮದ ಕಲ್ಯಾಣಿ ಬಳಿ ಇದೀಗ ಆತನ ಮೃತದೇಹ ಪತ್ತೆಯಾಗಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com