ಯುವಕನನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ

-ಜಾಕೀರ್ ಇಸ್ಮಾಯಿಲ್ (36) ಕೊಲೆಯಾದವರು

ತುಮಕೂರು;ಯುವಕನನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ತುಮಕೂರು ಹೊರವಲಯದಲ್ಲಿರುವ ಯಲ್ಲಾಪುರದ ಅಂಗಡಿಯೊಂದರಲ್ಲಿ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಮೂಲದ ಜಾಕೀರ್ ಇಸ್ಮಾಯಿಲ್ (36) ಎಂಬವರು ಕೊಲೆಯಾಗಿದ್ದಾರೆ.

ಜಾಕೀರ್ ಇಬ್ಬರು ಮಕ್ಕಳೊಂದಿಗೆ ಯಲ್ಲಾಪುರದ ಗಣೇಶ ದೇವಸ್ಥಾನದ ಬಳಿ ವಾಸವಿದ್ದರು.2 ತಿಂಗಳ ಹಿಂದೆ ನೂತನ ಟೈಲ್ಸ್‌ನ ಅಂಗಡಿಯನ್ನು ಯಲ್ಲಾಪುರದಲ್ಲಿ ತೆರೆದಿದ್ದನು. ಅಂಗಡಿಯಲ್ಲಿ ಕಾರ್ಯನಿರ್ವಹಿಸುವ ವೇಳೆ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಬಗ್ಗೆ ವರದಿಯಾಗಿದೆ.

ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊಲೆ ನಡೆದ ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಶಹಪುರವಾಡ್ ಮತ್ತು ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಕೀರ್ ಸಹಾಯಕ ಖಾದರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಜಾಕೀರ್ ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ‌.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com