ಬಂಟ್ವಾಳ; ತುಂಬೆ ಬಳಿ ಕಾರು ಅಪಘಾತ; ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಬಂಟ್ವಾಳ:ಚಾಲಕ‌ನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ತುಂಬೆಯಲ್ಲಿ ನಡೆದಿದೆ.

ಮಂಗಳೂರು ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ, ಪುತ್ತೂರಿನ ಕೂರ್ನಡ್ಕ ನಿವಾಸಿ ಹನಾ (19) ಮೃತಪಟ್ಟ ವಿದ್ಯಾರ್ಥಿನಿ.

ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂ ಶಮೀಮಾ ದಂಪತಿಯ ಪುತ್ರಿಯಾಗಿರುವ ಹನಾ ಅಲೋಶಿಯಸ್ ಕಾಲೇಜಿನ ಬಿಬಿಎಂ ವಿದ್ಯಾರ್ಥಿನಿ.

ಹನಾ ಪುತ್ತೂರಿನಿಂದ ಮಂಗಳೂರು ಕಡೆಗೆ ಐ20 ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು, ಪಲ್ಟಿಯಾಗಿದೆ.ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದೆ.

ಟಾಪ್ ನ್ಯೂಸ್