ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಢಿಕ್ಕಿ; ಮಹಿಳೆ ಮೃತ್ಯು

ಕಾರ್ಕಳ:ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅತ್ತೂರಿನಲ್ಲಿ ನಡೆದಿದೆ.

ಜಾಹಿರ ಬಾನು ಮೃತ ದುರ್ದೈವಿ.ಝಾಹಿರ ಬಾನು ತನ್ನ ಸ್ಕೂಟಿಯಲ್ಲಿ ಅತ್ತೂರು ಕಡೆಗೆ ಹೋಗುವಾಗ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.ಈ ವೇಳೆ ಸ್ಕೂಟಿ ಸಮೇತ ರಸ್ತೆಗೆ ಬಿದ್ದ ಝಾಹಿರ ಬಾನು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಕುರಿತು ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್