ಬೆಂಗಳೂರು;ರಾಜ್ಯದಲ್ಲಿ ಟೊಮೆಟೊ ಬೆಲೆ ದುಪ್ಪಟ್ಟಾಗಿದೆ. ಚಿಲ್ಲರೆ ವ್ಯಾಪಾರದಲ್ಲಿ ಟೊಮೆಟೊ ದರ ಕೆಜಿಗೆ 80 ರಿಂದ 120 ರೂಪಾಯಿಗೆ ಏರಿಕೆಯಾಗಿದೆ.
ಸಗಟು ಮಾರುಕಟ್ಟೆಯಲ್ಲಿ ಟೊಮೇಟೊ ಬೆಲೆ ಕೆಜಿಗೆ 30-35 ರಿಂದ 65-70 ರೂಪಾಯಿಗೆ ಏರಿದೆ.
ಏಕಾಏಕಿ ಸುರಿದ ಮಳೆಯಿಂದಾಗಿ ತರಕಾರಿ ಬೆಲೆಯಲ್ಲಿ ಭಾರೀ ಹೆಚ್ಚಳ ಕಂಡುಬಂದಿದೆ. ಕೆಜಿಗೆ ಕೇವಲ 20-25 ರೂಪಾಯಿಗೆ ಮಾರಾಟವಾಗುತ್ತಿದ್ದ ಟೊಮೆಟೊ ಬೆಲೆ ಈಗ ಮಾರುಕಟ್ಟೆಯಲ್ಲಿ ಕೆಜಿಗೆ 120 ರೂಪಾಯಿಗೆ ತಲುಪಿದೆ.
ಟೊಮೆಟೊ ಜತೆಗೆ ಇನ್ನೂ ಹಲವು ತರಕಾರಿಗಳ ಬೆಲೆಯೂ ಏರಿಕೆಯಾಗಿದೆ.ಬೀನ್ಸ್ ಚಿಲ್ಲರೆ ಮಾರಾಟಕ್ಕೆ ಕೆಜಿಗೆ 100 ರೂ ತಲುಪಿದೆ.
ದೆಹಲಿಯಲ್ಲಿ ಕಳೆದ 2 ದಿನಗಳಲ್ಲಿ ಟೊಮೆಟೊ ಬೆಲೆ ಎರಡು ಪಟ್ಟು ಹೆಚ್ಚಾಗಿದೆ. ಬೆಂಗಳೂರಲ್ಲೂ ಟೊಮೆಟೋ ಬೆಲೆ 100 ರೂಪಾಯಿ ದಾಟಿದೆ. ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಟೊಮೆಟೊ ಬೆಲೆ ಏರಿಕೆಯಾಗುತ್ತಿದೆ.