ಉಡುಪಿ; ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಹಣ ಜಪ್ತಿ, ಬೆಳ್ತಂಗಡಿ ನಿವಾಸಿ ವಶಕ್ಕೆ

-ಬಶೀರ್ (42) ಎಂಬಾತ ಪೊಲೀಸರು ವಶಕ್ಕೆ
-20 ಲಕ್ಷ ಹಣ ಜಪ್ತಿ

ಬೈಂದೂರು:ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಬೈಂದೂರು ಠಾಣೆಯ ಪೊಲೀಸರು ಜಪ್ತಿ ಮಾಡಿರುವ ಬಗ್ಗೆ ವರದಿಯಾಗಿದೆ.

ಪೊಲೀಸರು ಶಿರೂರು ಚೆಕ್‌ಪೋಸ್ಟ್‌ನಲ್ಲಿ ನಿನ್ನೆ ಮಧ್ಯಾಹ್ನ ವಾಹನ ತಪಾಸಣೆ ನಡೆಸುತ್ತಿದ್ದಾಗ ಭಟ್ಕಳದಿಂದ ಬಂದ ನಂಬರ್ ಪ್ಲೇಟ್ ಇಲ್ಲದ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ.

ಕಾರಿನ ಹಿಂಬದಿ ಸೀಟಿನ ಕೆಳಗೆ ಪ್ಲಾಸ್ಟಿಕ್ ಬಂಡಲ್ ನಲ್ಲಿ ನಗದು ಕಂಡುಬಂದಿದೆ.ಹಣದ ದಾಖಲೆ ಬಗ್ಗೆ ವಿಚಾರಣೆ ನಡೆಸಿದಾಗ ಚಾಲಕ ದಾಖಲೆ ನೀಡಲು ವಿಫಲನಾಗಿದ್ದಾನೆ.ಇದರಿಂದ ಪೊಲೀಸರು ನಗದನ್ನು ಜಪ್ತಿ ಮಾಡಿದ್ದಾರೆ.

ಕಾರು ಚಲಾಯಿಸುತ್ತಿದ್ದ ಬೆಳ್ತಂಗಡಿ ಶಿರ್ಲಾಲು ನಿವಾಸಿ ಬಶೀರ್ (42) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್