ಕಬ್ಬಿಣದ ಪೆಟ್ಟಿಗೆಯಲ್ಲಿ ಮೂವರು ಸಹೋದರಿಯರ ಮೃತದೇಹ ಪತ್ತೆ ಕೇಸ್ ಗೆ ಸ್ಪೋಟಕ ಟ್ವಿಸ್ಟ್

ಕಬ್ಬಿಣದ ಪೆಟ್ಟಿಗೆಯಲ್ಲಿ ಮೂವರು ಸಹೋದರಿಯರ ಮೃತದೇಹ ಪತ್ತೆ ಕೇಸ್ ಗೆ ಸ್ಪೋಟಕ ಟ್ವಿಸ್ಟ್

ಪಂಜಾಬ್;ಕಬ್ಬಿಣದ ಪೆಟ್ಟಿಗೆಯಲ್ಲಿ ಮೂವರು ಹೆಣ್ಣುಮಕ್ಕಳ ಮೃತದೇಹ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು,ಇದೀಗ ಮಕ್ಕಳ ಹೆತ್ತವರನ್ನು ಪೊಲೀಸರು ಬಂಧಿಸಿದ್ದಾರೆ.

ಜಲಾಂಧರ್ನ ಮುಖ್ಸುದನ್ ಪ್ರದೇಶದಲ್ಲಿ ಬಡತನದಿಂದ ಬೇಸತ್ತ ವಲಸೆ ಕಾರ್ಮಿಕ ಸುಶೀಲ್ ಮಂಡಲ್ ಹಾಗೂ ಆತನ ಪತ್ನಿ ಮೀನು ತಮ್ಮ ಮೂವರು ಪುತ್ರಿಯರನ್ನು ಹತ್ಯೆಗೈದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸುಶೀಲ್ ಮಂಡಲ್ ಹಾಗೂ ಮೀನು ದಂಪತಿಗೆ ಮೂವರು ಹೆಣ್ಣು ಮಕ್ಕಳು ಸೇರಿದಂತೆ ಐದು ಮಂದಿ ಮಕ್ಕಳು. ಇವರಲ್ಲಿ ಮೂವರು ಹೆಣ್ಣು ಮಕ್ಕಳನ್ನು ಹತ್ಯೆಗೈದು ಪೆಟ್ಟಿಗೆಯಲ್ಲಿ ತುಂಬಿಸಿ ಮನೆಯಲ್ಲಿರಿಸಿದ್ದರು. ಎರಡು ವರ್ಷದ ಪುತ್ರ ಹಾಗೂ 1 ವರ್ಷದ ಪುತ್ರಿಯನ್ನು ಕರೆದುಕೊಂಡು ಕೆಲಸಕ್ಕೆ ತೆರಳಿದ್ದರು.

ತಮ್ಮ ಪುತ್ರಿಯರಾದ ಅಮೃತ ಕುಮಾರಿ(9), ಶಕ್ತಿ ಕುಮಾರಿ (7),ಕಾಂಚನ (4) ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದರು.

ದಂಪತಿಯ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಸಂದರ್ಭ 4 ಹಾಗೂ 9 ವರ್ಷಗಳ ನಡುವಿನ ಪ್ರಾಯದ ಮೂವರು ಹೆಣ್ಣು ಮಕ್ಕಳ ಮೃತದೇಹ ಪೆಟ್ಟಿಗೆಯಲ್ಲಿ ಪತ್ತೆಯಾಗಿದೆ.

ತಮ್ಮ ಮೂವರು ಮಕ್ಕಳಿಗೆ ವಿಷ ನೀಡಿ ಹತ್ಯೆಗೈದು, ಪೆಟ್ಟಿಗೆಯಲ್ಲಿ ತುಂಬಿಸಿಟ್ಟಿರುವುದಾಗಿ ತನಿಖೆಯ ವೇಳೆ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್