ಉಳ್ಳಾಲ;ಯುವತಿಯ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದೆ.
ಛತ್ತೀಸಗಢ ಮೂಲದ ಸರಿತಾ (23)ಮೃತರು.ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಲಾಗಿದೆ.
ಸರಿತಾ ವರ್ಮ ವಿಶೇಷ ಚೇತನರಾಗಿದ್ದು,ಬಾಯಿ ಮತ್ತು ಕಿವಿ ಕೇಳುತ್ತಿರಲಿಲ್ಲ.ಸರಿತಾ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿ ಕಟ್ಟಲಾಗಿದೆ. ಇದು ಸಂಶಯಕ್ಕೆ ಕಾರಣವಾಗಿದ್ದು ಕೊಲೆ ಮಾಡಿ ನೇಣಿಗೆ ಹಾಕಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.