ಹುಬ್ಬಳ್ಳಿ; ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾದ ಘಟನೆ ಹುಬ್ಬಳ್ಳಿಯ ಆನಂದ ನಗರದಲ್ಲಿ ನಡೆದಿದೆ.
ಆನಂದ ನಗರದ ವೆಲ್ ಕಮ್ ಹಾಲ್ ಮುಂದೆ ಜೈಲಾನಿ ಶೇಖ್ ಹಾಗೂ ಜಾವಿದ್ ಶೇಖ್ ಎನ್ನುವ ಯುವಕರಿಗೆ ಚಾಕು ಇರಿಯಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಜೈಲಾನಿ ಶೇಖ್ ಹಾಗೂ ಜಾವಿದ್ ಶೇಖ್ ನ ಎದೆ ಮತ್ತು ತಲೆಗೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.
ಇಬ್ಬರೂ ಸಹೋದರರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಗಾಯಗೊಂಡಿರುವ ಇಬ್ಬರನ್ನೂ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.