ಉಡುಪಿ;ಜಲಪಾತದ ಬಳಿ ರೀಲ್ಸ್ ಮಾಡುವಾಗ ಯುವಕ ಜಾರಿಬಿದ್ದು ಇದ್ದಕ್ಕಿದ್ದಂತೆ ಕಣ್ಮರೆಯಾದ ಘಟನೆ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಅರಿಶಿನಗುಂಡಿ ಜಲಪಾತದಲ್ಲಿ ನಡೆದಿದೆ.
ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತ ಯುವಕ ಎಂದು ಗುರುತಿಸಲಾಗಿದೆ.ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ಜಾರಿಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಯ ದೃಶ್ಯ ಸ್ನೇಹಿತನ ಮೊಬೈಲ್ ನಲ್ಲಿ ಸೆರೆಯಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಯುವಕನ ಮೃತದೇಹ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.ಯುವಕ ಜಲಪಾತದ ಪಾಲಾಗುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.