ಉಡುಪಿ;ವ್ಯಕ್ತಿಯನ್ನು ಅಪಹರಿಸಿ ಮರಕ್ಕೆ ಕಟ್ಟಿ ಹಾಕಿ ಹಲ್ಲೆ, ದೂರು

-ಅಬ್ದುಲ್ ಜಬ್ಬಾರ್(38) ಎಂಬವರ ಮೇಲೆ ಹಲ್ಲೆ ನಡೆದಿದೆ.

ಉ‌ಡುಪಿ;ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷ್ಯ ಹೇಳಿದ ವ್ಯಕ್ತಿಯನ್ನು ಅಪಹರಿಸಿ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಹಿಂಸೆ ನೀಡಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಟ್ಟೆ ಲೆಮಿನಾ ಕ್ರಾಸ್ ನಿವಾಸಿ ಅಬ್ದುಲ್ ಜಬ್ಬಾರ್(38) ಎಂಬವರ ಮೇಲೆ ಹಲ್ಲೆ ನಡೆದಿದೆ.

ಜಬ್ಬಾರ್ ಮೇ 3ರಂದು ಉಡುಪಿ ಪೊಕ್ಸೊ ನ್ಯಾಯಾಲಯಕ್ಕೆ ಸಾಕ್ಷಿ ನುಡಿಯಲು ಕೋರ್ಟಿಗೆ ಹೋಗಿದ್ದರು. ಸಾಕ್ಷಿ ನುಡಿದು ಸಂಬಂಧಿಕರ ಮನೆಗೆ ಆಟೋದಲ್ಲಿ ತೆರಳುತ್ತಿದ್ದಾಗ ಉಡುಪಿ ಗುಂಡಿಬೈಲು ರಸಿಕಾ ಬಾರ್ ಬಳಿ ಎರಡು ಕಾರು ಮತ್ತು ಒಂದು ದ್ವಿಚಕ್ರ ವಾಹನದಲ್ಲಿ ಬಂದು ಅಡ್ಡಗಟ್ಟಿ ಅಬ್ದುಲ್ ಜಬ್ಬಾರ್ ಬಟ್ಟೆಯನ್ನು ಕಳಚಿ ಹಲ್ಲೆ ಮಾಡಿದ್ದಾರೆಂದು ದೂರಲಾಗಿದೆ.

ಇದಲ್ಲದೆ ತಂಡದಲ್ಲಿದ್ದ ಆರೋಪಿಗಳಾದ ಫಾರೂಕ್, ಶಾರೂಕ್,ಅನಿಲ್,ಇಕ್ಬಾಲ್ ಸಾಣೂರ್ ಆಟೋ ರಿಕ್ಷಾದಿಂದ ಹೊರಗೆ ಎಳೆದು ಕಾರಿನೊಳಗೆ ಬಲಾತ್ಕಾರವಾಗಿ ಕೂರಿಸಿಕೊಂಡು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.

ಬಳಿಕ ಮೇ 4ರಂದು ಬೆಳಗ್ಗೆ 10 ಗಂಟೆಗೆ ಬಂಟಕಲ್ ಬಿ.ಸಿ.ರೋಡ್ ಪಂಜಿಮಾರು ಬಳಿ ಕರೆದೊಯ್ದು ಪೊದೆಯೊಂದಕ್ಕೆ ದೂಡಿ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವ ಬಗ್ಗೆ ವರದಿಯಾಗಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com