ಬಿಜೆಪಿಯ ಭದ್ರಕೋಟೆಯಾಗಿಯೇ ಉಳಿದುಕೊಂಡ ಕರಾವಳಿ; ಉಡುಪಿ& ದಕ್ಷಿಣ ಕನ್ನಡದಲ್ಲಿ ಗೆಲುವು ಕಂಡ ಎಲ್ಲಾ ಅಭ್ಯರ್ಥಿಗಳ ವಿವರ ಇಲ್ಲಿದೆ…

ಬೆಂಗಳೂರು; ರಾಜ್ಯ ವಿಧಾನ ಸಭಾ ಚುನಾವಣಾ ಫಲಿತಾಂಶದಲ್ಲಿ ಕರಾವಳಿ ಬಿಜೆಪಿ ಭದ್ರಕೋಟೆಯಾಗಿಯೇ ಉಳಿದು ಕೊಂಡಿದೆ.

ಬಿಜೆಪಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವನ್ನು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯಶ್‌ಪಾಲ್ ಸುವರ್ಣ ಕಾಂಗ್ರೆಸ್​ನ ಪ್ರಸಾದ್​ ಕಾಂಚನ್​ ಹಾಗೂ ಜೆಡಿಎಸ್​ನ ದಕ್ಷತ್​ ಆರ್​ ಶೆಟ್ಟಿ ವಿರುದ್ಧ 32,776 ಸಾವಿರ ಮತಗಳ ಅಂತರದಲ್ಲಿ ಗೆಲ್ಲುವ ಮೂಲಕ ಗೆಲುವಿನ ನಗೆ ಬೀರಿದ್ಧಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಇಂಧನ ಸಚಿವ ಸುನೀಲ್​ ಕುಮಾರ್​ ಕಾಂಗ್ರೆಸ್​ನ ಉದಯ್​ ಶೆಟ್ಟಿ ಮುನಿಯಾಲ್​ ವಿರುದ್ಧ 4,602 ಸಾವಿರ ಮತಗಳ ಅಂತರದಲ್ಲಿ ಜಯ ಗಳಿಸಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗುರ್ಮೆ ಸುರೇಶ್​ ಶೆಟ್ಟಿ ಕಾಂಗ್ರೆಸ್​ನ ವಿನಯ್​ ಕುಮಾರ್​ ಸೊರಕೆ ವಿರುದ್ಧ 13,004 ಸಾವಿರ ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗುರುರಾಜ್​ ಶೆಟ್ಟಿ ಘಂಟಿಹೊಳೆ ಕಾಂಗ್ರೆಸ್​ನ ಗೋಪಾಲ್​ ಪೂಜಾರಿ ವಿರುದ್ಧ 16,135 ಸಾವಿರ ಮತಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ.

ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕಿರಣ್​ ಕುಮಾರ್​ ಕೊಡ್ಗಿ ಕಾಂಗ್ರೆಸ್​ನ ದಿನೇಶ್​ ಹೆಗ್ಡೆ ವಿರುದ್ಧ 41,556 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಗಳ 8 ಕ್ಷೇತ್ರಗಳ ಪೈಕಿ‌ ಆರು ಕ್ಣೇತಗಳು ಬಿಜೆಪಿಯ ಪಾಲಾಗಿದೆ.

ಮಂಗಳೂರು ದಕ್ಷಿಣದಲ್ಲಿ ವೇದವ್ಯಾಸ್ ಕಾಮತ್ ಕಾಂಗ್ರೆಸ್ ನ ಜೆಆರ್ ಲೋಬೋ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಡಾ.ಭರತ್ ಶೆಟ್ಟಿ ಮಂಗಳೂರು ಉತ್ತರದಲ್ಲಿ ಇನಾಯತ್ ಅಲಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಉಮಾನಾಥ ಕೋಟ್ಯಾನ್ ಮೂಡುಬಿದಿರೆಯಲ್ಲಿ ಮಿಥುನ್ ರೈ ವಿರುದ್ದ ಗೆಲುವು ಸಾಧಿಸಿದ್ದಾರೆ

ಬಂಟ್ವಾಳದಲ್ಲಿ ರಮಾನಾಥ ರೈಗೆ ಸೋಲಿಸಿ ರಾಜೇಶ್ ನಾಯ್ಕ್ ಗೆಲುವು ಸಾಧಿಸಿದ್ದಾರೆ.ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ, ಜಿ.ಕೃಷ್ಣಪ್ಪ ವಿರುದ್ಧ ಭಾಗೀರಥಿ ಮುರುಳ್ಯ ಸುಳ್ಯದಲ್ಲಿ ಗೆಲುವು ಸಾಧಿಸಿದ್ದಾರೆ.

ಕರಾವಳಿಯ ಉಳ್ಳಾಲದಲ್ಲಿ(ಮಂಗಳೂರು) ಯುಟಿ ಖಾದರ್ ಹಾಗೂ ಪುತ್ತೂರಿನಲ್ಲಿ ಅಶೋಕ್ ರೈ ಇಬ್ಬರು ಮಾತ್ರ ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com