ನೇಜಾರು: ತಾಯಿ-ಮಕ್ಕಳ ಕೊಲೆ ಪ್ರಕರಣ; ಆರೋಪಿಯ ಜಾಮೀನು ಅರ್ಜಿ ವಜಾ

ಉಡುಪಿ:ನೇಜಾರಿನಲ್ಲಿ ತಾಯಿ-ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.

ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಕೋರಿ ಡಿ.14ರಂದು ಅರ್ಜಿಯನ್ನು ವಕೀಲ ಕೆ.ಎಸ್.ಎನ್.ರಾಜೇಶ್ ಮೂಲಕ ಸಲ್ಲಿಸಿದ್ದನು. ಇದಕ್ಕೆ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿದ್ದರು.

ಈ ಕುರಿತು ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ, ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದರು.

ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇಜೌಟ್ನಲ್ಲಿ ಹಸೀನಾ ಹಾಗೂ ಅವರ ಮೂವರು ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಆಸೀಮ್ನ್ನು (12) ಬರ್ಬರವಾಗಿ ಇರಿದು ಹತ್ಯೆ ಮಾಡಲಾಗಿತ್ತು. ಈ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪ್ರವೀಣ್ ಅರುಣ್ ಚೌಗಲೆ(35)ಯನ್ನು ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಬಂಧಿಸಲಾಗಿತ್ತು.

ಟಾಪ್ ನ್ಯೂಸ್