ಉಡುಪಿ; ತಾಯಿ ಮಕ್ಕಳ ಹತ್ಯೆ ಪ್ರಕರಣ; ಪೊಲೀಸ್ ತನಿಖೆಯ ವೇಳೆ ಕಾರಣ ಬಯಲು

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಮಹತ್ವದ ಮಾಹಿತಿಯನ್ನು ನೀಡಿದ್ದು, ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ ಗಗನಸಖಿ ಐನಾಝ್ ಮೇಲಿನ ಅಸೂಯೆ ಮತ್ತು ದ್ವೇಷವೇ ಈ ಕೊಲೆಗೆ ಕಾರಣ ಎಂಬುದು ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಪ್ರವೀಣ್, ಗಗನಸಖಿ ಐನಾಝ್ ಮೇಲೆ ದ್ವೇಷದಲ್ಲಿ ಈ ಕೊಲೆ ಮಾಡಿದ್ದಾನೆ. ತಡೆಯಲು ಬಂದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಕೂಡ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಅವರು ಹೇಳಿದ್ದಾರೆ.

ಆತ ಐನಾಝ್ ಳನ್ನು ಅತಿಯಾಗಿ ಹಚ್ಚಿಕೊಂಡು ಆಕೆ ತನ್ನ ನಿಯಂತ್ರಣದಲ್ಲಿಯೇ ಇರಬೇಕೆಂಬ ಮನಸ್ಥಿತಿಯಿಂದ ಈ ಕೊಲೆ ಮಾಡಿದ್ದಾನೆ ಎಂದು ತನಿಖೆ ವೇಳೆ ಹೇಳಿದ್ದಾನೆ.

ಉಡುಪಿಯಲ್ಲಿ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿ ಪ್ರವೀಣ್ ಚೌಗಲೆಗೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಪ್ರವೀಣ್ ಗೆ 14 ದಿನಗಳ ಪೊಲೀಸ್ ಕಸ್ಟಡಿ ನೀಡಿದೆ.

ಟಾಪ್ ನ್ಯೂಸ್